ಶಿವಮೊಗ್ಗ: ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಯೋಜನೆಯಡಿ ಜೆಟ್ ಪೈಪು/ಸ್ಪ್ರಿಂಕ್ಲಲ್ ಸೌಲಭ್ಯ ಪಡೆಯಲು ಕೃಷಿ ಇಲಾಖೆ ಶಿವಮೊಗ್ಗ ವತಿಯಿಂದ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿವಮೊಗ್ಗ ಸಹಾಯಕ ಕೃಷಿ ನಿರ್ದೇಶಕರು ರಮೇಶ್ ಎಸ್ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು ಶೇ. 90ರ ಸಹಾಯಧನದಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ವಿತರಿಸಲಾಗುತ್ತಿದೆ.
ಅವಶ್ಯಕತೆ ಇರುವ ರೈತರು ಸದರಿ ಯೋಜನೆಯ ಉಪಯೋಗ ಪಡೆಯಲು ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, 2 ಪಾಸ್‌ಪೋರ್ಟ್ ಸೈಜ್ ಫೋಟೋ, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್, ನೋಟರಿ, ಜಾತಿ ಪ್ರಮಾಣ ಪತ್ರ (ಪ.ಜಾತಿ ಹಾಗೂ ಪ.ಪಂಗಡ) ಈ ದಾಖಲೆಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.
ಪ.ಜಾತಿ ಹಾಗೂ ಪ.ಪಂಗಡ ರೈತರು 7 ವರ್ಷಕೊಮ್ಮೆ ಮತ್ತು ಸಾಮಾನ್ಯ ರೈತರಿಗೆ ಒಮ್ಮೆ ಮಾತ್ರ ಈ ಸೌಲಭ್ಯ ಪಡೆಯಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲ್ಲೂಕಿನ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳನ್ನು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು.




