ಬಳ್ಳಾರಿ: ಪೌರರಕ್ಷಣಾ ದಳದಲ್ಲಿ ಸ್ವಯಂ ಸೇವಕರಾಗಿ ಸದಸತ್ವ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪೌರರಕ್ಷಣಾ ದಳದ ಮುಖ್ಯ ವಾರ್ಡನ್ ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಪ್ರಕೃತಿ ವಿಕೋಪ, ವಿಪತ್ತು ನಿರ್ವಹಣೆ ಮತ್ತು ಮಾನವ ನಿರ್ಮಿತ ವಿಕೋಪಗಳ ಸಮಯದಲ್ಲಿ ಸಾರ್ವಜನಿಕರ ಆಸ್ತಿ ಮತ್ತು ಪ್ರಾಣ ಕಾಪಾಡುವ ಉದ್ದೇಶವಾಗಿದೆ. ಇಂತಹ ಸಾಮಾಜಿಕ ಕಾರ್ಯ ಮಾಡಲು ಇಚ್ಛಿಸುವ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳು ಸದಸ್ಯರಾಗುವ ಮೂಲಕ ಸೇವೆ ಸಲ್ಲಿಸಬಹುದು.
ಪೌರರಕ್ಷಣಾ ವಿಭಾಗದ ಸದಸ್ಯನಾಗಲು ಯಾವುದೇ ವಿದ್ಯಾರ್ಹತೆ ಇರುವುದಿಲ್ಲ. ಮಾಜಿ ಯೋಧರು ಮತ್ತು ನಿವೃತ್ತ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮುನ್ನಡೆಸಬಹುದು. ಈ ಸದಸ್ಯರು ಸಮಾಜ ಸೇವೆಯ ಭಾವನೆಯಿಂದ ಬರಬೇಕೆ ಹೊರತು ಅನ್ಯ ಭಾವನೆಗಳಿಂದ ಕೂಡಿರುವುದಿಲ್ಲ.
ಸ್ವ-ಇಚ್ಛೆಯಿಂದ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬೇಕು. ಸರ್ಕಾರದ ಯಾವುದೇ ಧನಸಹಾಯ ಇರುವುದಿಲ್ಲ. ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ರಸ್ತೆಯ ಜಿಲ್ಲಾ ಪೌರರಕ್ಷಣಾ ಕಚೇರಿಯಲ್ಲಿ ಜೂನ್ 05 ರವರೆಗೆ ಅರ್ಜಿ ವಿತರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.08392 276421 ಗೆ ಸಂಪರ್ಕಿಸಬಹುದು.




