ದಾವಣಗೆರೆ: ದಾವಣಗೆರೆ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಮತ್ತು ಉಪಾಧೀಕ್ಷಕರು, ನಿರೀಕ್ಷಕರು ಹರಿಹರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏ.10 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸಲಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಸೌಲಭ್ಯ, ಸೇವೆಗಾಗಿ ಅರ್ಜಿ ಸಲ್ಲಿಸಿದ ವೇಳೆ ವಿಳಂಬ ನೀತಿ, ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸದೆ ತಾರತಮ್ಯ, ಕಳಪೆ ಕಾಮಗಾರಿ, ಹಣ ದುರುಪಯೋಗ, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ದೂರುಗಳನ್ನು ಸ್ವೀಕರಿಸಲಾಗುತ್ತದೆ.
ಸಾರ್ವಜನಿಕರು ತಮ್ಮ ದೂರುಗಳನ್ನು ಪ್ರಪತ್ರ-1 ಮತ್ತು 2 ರ ಅಫಿಡವಿಟ್ನೊಂದಿಗೆ ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ, ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



