ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

2 years ago

#BRAmbedkar #Development #Corporation #Application #Submission #Period #Extension

ಬಳ್ಳಾರಿ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನಲ್ಲಿ ವಿವಿಧ ನಿಗಮಗಳಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಯನ್ನು ಅನುಷ್ಠಾನಗೊಳಿಸಲು ಸೇವಾ ಸಿಂಧು, ಗ್ರಾಮ ಒನ್, ಕರ್ನಾಟಕ ಒನ್ನೆಲ್ಲಿ ಅನ್ಲೈನನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Leave a Reply