ಬೆಂಗಳೂರು: ಕೃಷಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ (BTM) ಹುದ್ದೆ-1 ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) – 02 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ ಆತ್ಮ ಯೋಜನಾ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಆಸಕ್ತರು ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ (BTM) ಹುದ್ದೆಗೆ MSC. Agri / Allied Subject ಪದವಿಯೊಂದಿಗೆ ಕನಿಷ್ಠ 02 ವರ್ಷಗಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಹಿಸಿದ ಅನುಭವ ಹೊಂದಿರಬೇಕು. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) – ಹುದ್ದೆಗೆ BSC. Agri / Allied Subject ಪದವಿಯೊಂದಿಗೆ ಕನಿಷ್ಠ01 ವರ್ಷಗಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಹಿಸಿದ ಅನುಭವ ಹೊಂದಿರಬೇಕು.
ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಸೂಕ್ತ ದಾಖಲೆಗಳನ್ನು ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೃಷಿ ಸಂಕೀರ್ಣ, ಎಸ್.ಕರಿಯಪ್ಪ ರಸ್ತೆ (ಕನಕಪುರ ರಸ್ತೆ) ಬನಶಂಕರಿ, ಬೆಂಗಳೂರು -560 070 ಇಲ್ಲಿ ಅಕ್ಟೋಬರ್ 24, 2025 ರೊಳಗೆ ಕಚೇರಿಯ ಅವಧಿಯೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-26711594 ಗೆ ಸಂಪರ್ಕಿಸಹುದು.




