ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ತಾಲ್ಲೂಕು ಮಟ್ಟದ ಕಚೇರಿಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಆನೇಕಲ್ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು- 01 ಮತ್ತು ಬೆಂಗಳೂರು ರಾಜ್ಯ ಯೋಜನೆಯ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು-01 ಹುದ್ದೆಗಳಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಆಸಕ್ತ ಅಭ್ಯರ್ಥಿಗಳನ್ನು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪಡದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್.ಮರಿಗೌಡ ರಸ್ತೆ, ಬೆಂಗಳೂರು ಇಲ್ಲಿ ಕಚೇರಿ ಸಮಯದಲ್ಲಿ ಸೆಪ್ಟೆಂಬರ್ 1 2025 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ: 080-29578688 ಮೂಲಕ ಸಂಪರ್ಕಿಸಬಹುದು.




