ಬಳ್ಳಾರಿ: ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ ತಿಳಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳೊಡನೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ಅಥವಾ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆ ಕಚೇರಿ ಮುಖಾಂತರ ಆನ್ಲೈನ್ನಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ.
ಯೋಜನೆಗಳ ವಿವರ: ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಮತ್ಸ್ಯ ವಾಹಿನಿ ಯೋಜನೆಯಡಿ ಐಸ್ ಬಾಕ್ಸ್ ನೊಂದಿಗೆ ಮೊಪೆಡ್ ಮತ್ತು ಸೈಕಲ್ ಖರೀದಿಸಲು ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.




