ಶಿವಮೊಗ್ಗ:ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ 58 ವರ್ಷ ತುಂಬಿರುವ ಪುರುಷ/ಮಹಿಳಾ/ಅಂಗವಿಕಲ ಕಲಾವಿದರುಗಳಿಂದ ಮಾಸಾಶನಕ್ಕಾಗಿ ಅರ್ಜಿ ಆಹ್ವಾನಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತ ಕಲಾವಿದರು ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.
ಕಲಾವಿದರು ಕನಿಷ್ಠ 25 ವರ್ಷಗಳಿಂದ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿರುವ ದಾಖಲಾತಿ ಹಾಗೂ ರೂ. 1.00 ಲಕ್ಷದೊಳಗಿನ ಆದಾಯ ಪ್ರಮಾಣ ಪತ್ರ ಹೊಂದಿದ್ದು, ಇಂತಹ ಕಲಾವಿದರು ಸರ್ಕಾರದಿಂದ ಇತರೆ ಯಾವುದೇ ಪಿಂಚಣಿಯನ್ನು ಪಡೆಯುತ್ತಿರಬಾರದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-223354 ನ್ನು ಸಂಪರ್ಕಿಸಬಹುದು.




