ಪ್ರವಾಸೋದ್ಯಮ ಇಲಾಖೆ
ಧಾರವಾಡ: ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದ ದೃಷ್ಟಿಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪ್ರವಾಸಿ ಮಾರ್ಗದರ್ಶನ ತರಬೇತಿ: ಧಾರವಾಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಪ್ರವಾಸಿ ಮಾರ್ಗದರ್ಶನ ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದಿ ್ಧತರಬೇತಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 8ನೇ ಮತ್ತು 10ನೇ ತರಗತಿ ಉತ್ತೀರ್ಣರಾದ 20 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರ ವಿಭಾಗದಲ್ಲಿ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 20, 2025 ರೊಳಗಾಗಿ ಧಾರವಾಡ ಪ್ರವಾಸೋದ್ಯಮ ಇಲಾಖೆಯ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0836-2955522 ಗೆ ಸಂಪರ್ಕಿಸಬಹುದು.




