ಧಾರವಾಡ: ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆಯ ಸಹಯೋಗದಲ್ಲಿ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ಯುವಕ ಮತ್ತು ಯುವತಿಯರಿಗೆ ಹಳಿಯಾಳದಲ್ಲಿ ವಿವಿಧ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಬರುವ ಜನವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಯ ಉಚಿತ ತರಬೇತಿಗಾಗಿ ಮತ್ತು ಫೆಬ್ರುವರಿ ತಿಂಗಳಲ್ಲಿ ಮಹಿಳೆಯರಿಗೆ ವಸ್ತ್ರವಿನ್ಯಾಸ (ಹೊಲಿಗೆ) ಕುರಿತು ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 10, 2024 ರೊಳಗಾಗಿ ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಿಕೊಳ್ಳಬೇಕೆಂದು ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆಯ ನಿರ್ದೇಶಕ ಪ್ರಶಾಂತ ಬಡ್ಡಿ ತಿಳಿಸಿದ್ದಾರೆ.




