ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿ ಆಹ್ವಾನ

5 months ago

ಧಾರವಾಡ: ಧಾರವಾಡ ತಾಲ್ಲೂಕಿನ ಮರೇವಾಡ ಹಾಗೂ ಕಲಘಟಗಿ ತಾಲ್ಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಯು ರಾಜೀನಾಮೆ ಹಾಗೂ ರದ್ದುಪಡಿಸಿದ ಪ್ರಯುಕ್ತ, ಮರೇವಾಡ  ಹಾಗೂ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಖಾಲಿಯಾಗಿರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇ.ಡಿ.ಸಿ.ಎಸ್. ನಿರ್ದೆಶನಾಲಯ, ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ತಾಲ್ಲೂಕುಗಳ 02 ಗ್ರಾಮ್-ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ      (https://www.karnatakaone.gov.in/Public/GramOneFranchiseeTerms)  ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜನೆವರಿ 15, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹೆಲ್ಪ ಡೆಸ್ಕ್ ಮೊಬೈಲ್ ಸಂಖ್ಯೆ 9019026687, 9019026697, 9019026690, 9019027696 ಸಂಪರ್ಕಿಸಬಹುದು.

Leave a Reply