ವಸತಿ ಸಹಿತ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

9 months ago

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿ ನವೆಂಬರ್ 05 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಶಾಖೆ, ರುಡ್ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಗಳನ್ನ  ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.  ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನ.

ತರಬೇತಿ ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದು.

Leave a Reply