ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾ.ಪಂ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿವುಳ್ಳವರು https://www.karnatakaone.gov.in/Public/GramOneFranchiseeTerms ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾ.15 ಕಡೆಯ ದಿನವಾಗಿದೆ.
ಶಿವಮೊಗ್ಗ ತಾಲ್ಲೂಕಿನ ಅಗಸವಳ್ಳಿಯಲ್ಲಿ 01, ಭದ್ರಾವತಿ ತಾಲ್ಲೂಕಿನ ಮಾವಿನಕೆರೆ 01, ಕೊಮ್ಮಾರನಹಳ್ಳಿ 01, ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು 01, ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು 01, ಹೊಸನಗರ ತಾಲ್ಲೂಕಿನ ತ್ರಿಣಿವೆ 01 ಮತ್ತು ಮುಂಬಾರುವಿನಲ್ಲಿ 01 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು.




