ಹಾಸನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳಿಗೆ 2025 ನೇ ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲು ಜಿಲ್ಲಾಡಳಿತದ ವತಿಯಿಂದ ತೀರ್ಮಾನಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ನಾಡು ನುಡಿ, ಕಲೆ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರ, ಪತ್ರಿಕಾ ಕ್ಷೇತ್ರ, ಕ್ರೀಡಾ ಕ್ಷೇತ್ರ ಮತ್ತು ಗ್ರಾಮೀಣ ಕಲೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರು ಅಥವಾ ಸಾಧಕರ ಬಗ್ಗೆ ಮಾಹಿತಿ ಹೊಂದಿರುವ ವ್ಯಕ್ತಿಗಳು ಸಾಧಕರ ಮಾಹಿತಿಯನ್ನು ಕರಾರುವಕ್ಕಾದ ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸುತ್ತಿರುವ ಕ್ಷೇತ್ರದ ಬಗ್ಗೆ ಸ್ಪಷ್ಟವಾಗಿ ನಮೂದಿಸಿ ಅಗತ್ಯ ದೃಢೀಕೃತ ದಾಖಲೆಗಳನ್ನು ದಿನಾಂಕ ಅ.30 ರಂದು ಮದ್ಯಾಹ್ನ 12 ಗಂಟೆಯೊಳಗೆ ಸಹಾಯಕ ಆಯುಕ್ತರು ಹಾಸನ ಉಪ ವಿಭಾಗ ಹಾಸನ ಇವರ ಕಚೇರಿಗೆ ಸಲ್ಲಿಸಬಹುದಾಗಿದೆ. ಈ ಹಿಂದೆ ಸನ್ಮಾನ ಪಡೆದುಕೊಂಡಿರುವ ಸಾಧಕರು ಮರು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಹಾಸನ ಉಪ ವಿಭಾಗಾಧಿಕಾರಿ ತಿಳಿಸಿದ್ದಾರೆ.




