ಅರಿವು ವಿದ್ಯಾಭ್ಯಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

11 months ago

ಹಾಸನ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದ ವಿದ್ಯಾರ್ಥಿಗಳಿಗೆ ‘ಅರಿವು’ ವಿದ್ಯಾಭ್ಯಾಸ ಯೋಜನೆಯಡಿಯಲ್ಲಿ ವೈದ್ಯಕೀಯ (ಎಂ.ಬಿ.ಬಿ.ಎಸ್) ಬಿಡಿಎಸ್, ಬಿ.ಇ/ಬಿ.ಟೆಕ್ ಬ್ಯಾಚುರಲ್ ಆಫ್ ಆರ್ಕಿಟೆಕ್ಚರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಇಂತಹ ಕೋರ್ಸ್ಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ “ಅರಿವು ವಿದ್ಯಾಭ್ಯಾಸ ಯೋಜನೆಯಡಿ” ಸಾಲ ಸೌಲಭ್ಯ ನೀಡಲಾಗುವುದು.

ಸಾಲವನ್ನು ಪಡೆಯಲು ವೆಬ್‌ಸೈಟ್ https://kmdc.karnataka.gov.in/4/arivu-education-loan-scheme/kn ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ಆನ್‌ಲೈನ್ ಅರ್ಜಿಯ ಹಾರ್ಡ್ ಕಾಪಿ ಮತ್ತು  ದಾಖಲಾತಿಗಳನ್ನು ಜಿಲ್ಲಾ ಕಚೇರಿಗೆ ನೇರವಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಮೇ.23 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ  ಜಿಲ್ಲಾ  ವ್ಯವಸ್ಥಾಪಕರ  ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ (ನಿ) ಮೌಲಾನಾ ಆಜಾದ್ ಭವನ, 1ನೇ ಮಹಡಿ, ಆಕಾಶವಾಣಿ ಕ್ವಾಟ್ರಸ್ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಶ್ರೀ ವಿದ್ಯಾ ಗಣಪತಿ ದೇವಸ್ಥಾನದ ಅಡ್ಡರಸ್ತೆ, ಮಲ್ನಾಡ್ ಇಂಜಿನಿಯರಿಂಗ್ ಕಾಲೇಜ್ ಹತ್ತಿರ, ಹಾಸನ-573202 ಇಲ್ಲಿಗೆ  ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸುವುದು. ಜಿಲ್ಲಾ ಕಚೇರಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಮೇ.23 ಆಗಿರುತ್ತದೆ. ಕಚೇರಿ ದೂರವಾಣಿ ಸಂಖ್ಯೆ:08172-246333 ಆಗಿರುತ್ತದೆ.

ಕಚೇರಿಗೆ ಸಲ್ಲಿಸಬೇಕಾದ ದಾಖಲಾತಿಗಳು: ಆನ್‌ಲೈನ್‌ನಲ್ಲಿ ಸಲ್ಲಿಸಿದ ಮೂಲ ಅರ್ಜಿ, ಆಧಾರ್ ಕಾರ್ಡ್, ಪಡಿತರ ಚೀಟಿಯ ಜೆರಾಕ್ಸ್ ಪ್ರತಿ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಾರ್ಕ್ಸ್ ಕಾರ್ಡ್ ಜೆರಾಕ್ಸ್ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ವಾರ್ಷಿಕ ಆದಾಯ 8,00,000/- ರೂ.ಗಳಒಳಗಿರಬೇಕು) ಪರೀಕ್ಷೆ ಪ್ರವೇಶ ಪತ್ರದ ಪ್ರತಿ, ಕನಿಷ್ಠ 100 ರ ಛಾಪಾಕಾಗದದಲ್ಲಿ ಮುಚ್ಚಳಿಕೆ ಪತ್ರ, ವಿದ್ಯಾರ್ಥಿ ಹಾಗೂ ಪೋಷಕರ ಭಾವ ಚಿತ್ರ -2.       

Leave a Reply