ಮೆಟ್ರಿಕ್ ಪೂರ್ವ – ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

2 months ago

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ 2026-27ನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ  ವಿದ್ಯಾರ್ಥಿಗಳು https://ssp.postmatric.karnataka.gov.in ಮೂಲಕ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ (SSP) ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ  ಸಹಾಯಕ ನಿರ್ದೇಶಕರು (ಗ್ರೇಡ್ -1) ರವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಟಿ.ಸಿ.ಪಾಳ್ಯ ಮುಖ್ಯರಸ್ತೆ, ಬೆಂಗಳೂರು ಪೂರ್ವ ತಾಲ್ಲೂಕು –560049, ದೂರವಾಣಿ ಸಂಖ್ಯೆ 080-29535045 ಅಥವಾ ಇ-ಮೇಲ್ tswoeastblore@gmail.com ಅನ್ನು ಸಂಪರ್ಕಿಸಬಹುದು.

Leave a Reply