ಹಾಸನ: 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ. ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ತರಬೇತಿ ನೀಡಲು “ಸೇವಾ ಸಿಂಧು ಪೋರ್ಟಲ್”ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.23, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಲಿಂಕ್ https://sevasindhuservices.karnataka.gov.in/ ಸಲ್ಲಿಸಬಹುದು.
ಷರತ್ತುಗಳು: ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸೇರಿದವರಾಗಿರಬೇಕು.
ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪಡೆದಿರಬೇಕು.
ತರಬೇತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯೋಮಿತಿಯನ್ನು ಕನಿಷ್ಠ 21 ಮತ್ತು ಗರಿಷ್ಠ 30 ವರ್ಷಗಳು. ಎತ್ತರ ಪುರುಷರಿಗೆ ಕನಿಷ್ಠ 168 ಸೆ.ಮೀ ಮತ್ತು ಮಹಿಳೆಯರಿಗೆ ಕನಿಷ್ಠ 157 ಸೆ.ಮೀ. ತೂಕ ಪುರುಷರಿಗೆ ಕನಿಷ್ಠ 50 ಕೆ.ಜಿ ಮತ್ತು ಮಹಿಳೆಯರಿಗೆ ಕನಿಷ್ಠ 45 ಕೆ.ಜಿ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂರ್ಪಕಿಸಬಹುದಾಗಿದೆ. ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.




