ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಗಳಲ್ಲಿ ದೂರ ಶಿಕ್ಷಣದ ಮೂಲಕ ಪದವೀಧರ, ಸ್ನಾತಕೋತ್ತರ ಶಿಕ್ಷಣ ಪಡೆಯುವ ಜಿಲ್ಲೆಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲಾಗುತ್ತಿದ್ದು, ದೂರ ಶಿಕ್ಷಣದ ಮೂಲಕ ಪದವೀಧರ, ಸ್ನಾತಕೋತ್ತರ ಹಾಗೂ ಪಿಹೆಚ್.ಡಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಆನ್ ಲೈನ್ ವೆಬ್‌ಸೈಟ್ https://www.ksoumysuru.ac.in/ ಗೆ ಭೇಟಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ-ಮೊ.9480843023, ಕೌಲ್ ಬಜಾರ್ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ-ಮೊ.9480843073, ಸಂಡೂರಿನ ಸಿಡಿಪಿಒ ಕಚೇರಿ ಹತ್ತಿರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ-ಮೊ.9480843079 ಮತ್ತು ಸಿರುಗುಪ್ಪದ ವಿನಾಯಕ ನಗರದ ಈಡಿಗರ ಶೀನಪ್ಪ ಲೇಔಟ್ ನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ-ಮೊ.9480843078 ಗೆ ಸಂಪರ್ಕಿಸಬಹುದು.




