ದಾವಣಗೆರೆ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಈ ವರ್ಷದ ಗಿರಿಜನ ಉಪಯೋಜನೆಯಡಿ ಕುರಿ 10 ಮತ್ತು ಮೇಕೆ 1 ಘಟಕ ಪೂರೈಕೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
ಈ ಯೋಜನೆಯು ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು, ಅಥವಾ ಪುರುಷ ಸದಸ್ಯರುಗಳನ್ನು ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಇಲ್ಲದೇ ಇರುವ ಜಿಲ್ಲೆ, ತಾಲೂಕುಗಳಲ್ಲಿಯೂ ಕುರಿ ಸಾಕಾಣಿಕೆದಾರರನ್ನು ಫಲಾನುಭವಿಗಳನ್ನಾಗಿ ಸರ್ಕಾರದಿಂದ ರಚಿಸಲಾಗಿರುವ ಜಿಲ್ಲಾ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿಗಳನ್ನು ಆಯಾ ತಾಲೂಕು ಮಟ್ಟದ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ.18 ರೊಳಗಾಗಿ ಸಲ್ಲಿಸಲು ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.




