ಹಾಸನ: ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಕೆಳಕಂಡ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತ ಅಭ್ಯರ್ಥಿಗಳು ದೃಢಿಕೃತ ಶೈಕ್ಷಣಿಕ ದಾಖಲಾತಿಗಳೊಂದಿಗೆ ಆ.28 ರೊಳಗೆ ಅರ್ಜಿಯನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಾಸನ ಇಲ್ಲಿಗೆ ಸಲ್ಲಿಸಬಹುದು.
ಶಾಲೆಗಳ ವಿವರ: ಮೌಲಾನಾ ಆಜಾದ್ ಮಾದರಿ ಶಾಲೆ, ಕೊಣನೂರು, ಅರಕಲಗೂಡು ತಾ|| ಇಂಗ್ಲೀಷ್ ಬಿ.ಎ ಬಿ.ಎಡ್, ಮೌಲಾನಾ ಆಜಾದ್ ಮಾದರಿ ಶಾಲೆ, ಸಕಲೇಶಪುರ ಗಣಿತ (ಆಂಗ್ಲ ಮಾಧ್ಯಮ) ಬಿ.ಎಸ್ಸಿ. ಬಿ.ಎಡ್.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂಪರ್ಕಿಸಬಹುದು.




