ದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒನ್ ಸ್ಟಾಪ್ ಸೆಂಟರ್ ಸಖಿ ಕೇಂದ್ರಕ್ಕೆ ಗೌರವಧನದ ಆಧಾರದ ಮೇಲೆ ಪ್ಯಾರಾಲೀಗಲ್ ಪರ್ಸನಲ್, ನ್ಯಾಯವಾದಿ ಹುದ್ದೆಗೆ ಸಿಬ್ಬಂದಿಯನ್ನು ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶ ರಾಜಾನಾಯ್ಕ ತಿಳಿಸಿದ್ದಾರೆ.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ಪ್ಯಾರಾಲೀಗಲ್ ಪರ್ಸನಲ್, ನ್ಯಾಯಾವಾದಿ ಹುದ್ದೆ ಸಂಖ್ಯೆ-1, ವಿದ್ಯಾರ್ಹತೆ ಕಾನೂನು ಪದವಿ, ವಕೀಲ ವೃತ್ತಿಯಲ್ಲಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಬೇಕು. ಸಂತ್ರಸ್ತ ಮಹಿಳೆ ಮತ್ತು ಮಕ್ಕಳ ಪ್ರಕರಣಗಳನ್ನು ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು. ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿ.9 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 7ನೇ ಮುಖ್ಯರಸ್ತೆ, ಎಂ.ಸಿ.ಸಿ. ಬಿ ಬ್ಲಾಕ್ ಕುವೆಂಪು ನಗರ, ದಾವಣಗೆರೆ-577004 ದೂ.ಸಂ:08192-295738, 9353428455 ನ್ನು ಸಂಪರ್ಕಿಸಬಹುದು.




