ಹಾಸನ: ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಅನುಮೋದನೆಯಾಗಿ ಖಾಲಿ ಇರುವ 13 ಶುಶ್ರೂಷಕಿಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಅನ್ವಯ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗೆ ಒಳಪಟ್ಟು ದಾಖಲಾತಿಗಳನ್ನು ಪರಿಶೀಲನೆಯನ್ನು ಜು.28 ರಂದು 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ವಿದ್ಯಾರ್ಹತೆ: ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲಿಂಗ್ನಲ್ಲಿ ನೊಂದಣಿಯಾಗಿರಬೇಕು.
ವಯೋಮಿತಿ: 45 ವರ್ಷಗಳು, ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ. ಕಿಯೋನಿಕ್ಸ್ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಕಡ್ಡಾಯ ಒS MS Office ಬಗ್ಗೆ ಮಾಹಿತಿ ಹೊಂದಿರತಕ್ಕದು. ಮಾಸಿಕ ವೇತನ ರೂ14,581.
ಜು.22 ರಿಂದ ಜು.24 ರವರೆಗೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ ಹಾಸನ ರವರಿಂದ ಅರ್ಜಿಗಳನ್ನು ಪಡೆದು ಅದೇ ದಿನ ಭರ್ತಿ ಮಾಡಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸುವುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೇಲಿನ ದಿನಾಂಕದAದು ಮೂಲ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಹಾಜರಾಗಲು ಸೂಚಿಸಿದೆ. ಅರ್ಜಿ ಸಲ್ಲಿಸಲು ಜು.24 ಕೊನೆಯ ದಿನಾಂಕವಾಗಿದೆ.




