ಹಾಸನ: ರಾಜ್ಯದ ಕೈಮಗ್ಗ ನೇಕಾರರ ಕೈಮಗ್ಗ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಹಾಗೂ ಬೆಂಬಲ ನೀಡಲು 2025-26 ನೇ ಸಾಲಿನಲ್ಲಿ ರೇಷ್ಮೆ, ಹತ್ತಿ, ಉಣ್ಣೆಕ್ಷೇತ್ರ, ವಲಯದ ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ ರಾಷ್ಟ್ರೀಯ ಕೈಮಗ್ಗ ದಿನಾಚರಣೆ (7 ಆಗಸ್ಟ್) ರಂದು ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠ, ತಾಂತ್ರಿಕತೆ ಹೊಂದಿರುವ ಉತ್ಪನ್ನದ ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡಲು ಉದ್ದೇಶಿಸಲಾಗಿದೆ. ಸದರಿ ಪ್ರಶಸ್ತಿಯು ನಗದು ಬಹುಮಾನ. ಒಂದು ನೆನಪಿನ ಕಾಣಿಕೆ. ಒಂದು ಶಾಲು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಮಾರ್ಗಸೂಚಿಯನ್ವಯ ಉತ್ತಮ ಕೈಮಗ್ಗ ಉತ್ಪನ್ನವನ್ನು ನೇಯ್ದಿರುವ ಕೈಮಗ್ಗ ನೇಕಾರರನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿಗಾಗಿ ಪ್ರಸ್ತಾವನೆ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ನೇಕಾರರು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಸಹಾಯಕ ನಿರ್ದೇಶಕರ ಕಚೇರಿ. ಕೈಮಗ್ಗ ಮತ್ತು ಜವಳಿ ಇಲಾಖೆ, ಡಿ.ಐ.ಸಿ ಬಿಲ್ಡಿಂಗ್. ಡೈರಿ ಸರ್ಕಲ್, ಹಾಸನ. ದೂರವಾಣಿ ಸಂಖ್ಯೆ:08172-240627 ಇವರನ್ನು ಸಂಪರ್ಕಿಸಬಹುದು.




