ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ

2 months ago

ಧಾರವಾಡ: ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದ ದೃಷ್ಠಿಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಧಾರವಾಡ ಜಿಲ್ಲೆಯ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಧಾರವಾಡ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಂಗಾಯಣ ಆವರಣ, ಹೋಟೆಲ್ ಮಂದಾರ ಹಿಂಭಾಗ, ಧಾರವಾಡ ರವರ ಕಛೇರಿಗೆ ದ್ವೀಪ್ರತಿಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:0836-2955522 ಗೆ ಸಂಪರ್ಕಿಸಬಹುದು.

Leave a Reply