ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

19 hours ago

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅವಕಾಶ

ದಾವಣಗೆರೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ದಾವಣಗೆರೆ ಜಿಲ್ಲಾ ಕಛೇರಿಯ ವತಿಯಿಂದ 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರಿಗಾಗಿ ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ )ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್ http://sevasindu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 17.10.2026 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 2022-23,2023-24, 2024-25, 2025-26 ನೇ ಸಾಲಿನಲ್ಲಿ ಆನ್‌ ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ,  ಹೆಚ್ಚಿನ ಮಾಹಿತಿಗಾಗಿ ನಿಗಮದ ದಾವಣಗೆರೆ ಜಿಲ್ಲಾ ಕಛೇರಿ ವ್ಯವಸ್ಥಾಪಕರು ಅಥವಾ ದೂರವಾಣಿ ಸಂಖ್ಯೆ: 08192-233309 ಅನ್ನು ಸಂಪರ್ಕಿಸಬಹುದು.

Leave a Reply