ಚಿತ್ರದುರ್ಗ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ನ. 01 ರಂದು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಗುರುನಾಥ್ ತಿಳಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕ್ರೀಡೆ, ಕೃಷಿ, ಸಮಾಜ ಸೇವೆ, ಶಿಕ್ಷಣ ಮತ್ತು ಸಾಹಿತ್ಯ, ಸಂಗೀತ, ರಂಗಭೂಮಿ, ಜಾನಪದ, ಮಾಧ್ಯಮ ಮತ್ತು ಛಾಯಾಗ್ರಹಣ, ವೈದ್ಯಕೀಯ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಹಾಗೂ ಸಾಧನೆ ಮಾಡಿರುವ ಅರ್ಹ ಸಾಧಕರು, ತಮ್ಮ ಸ್ವ-ವಿವರದೊಂದಿಗೆ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಅ. 24 ರಂದು ಸಂಜೆ 05 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತ.ರಾ.ಸು. ರಂಗಮಂದಿರ, ಚಿತ್ರದುರ್ಗ ಇವರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದು.




