ಅಂಚೆ ಇಲಾಖೆ ಉತ್ಪನ್ನಗಳ ಮಾರಾಟಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ

2 years ago

ಧಾರವಾಡ: ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ  ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲಗಳೊಂದಿಗೆ ಜನೆವರಿ 10, 2024 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕೆ.ಸಿ.ಪಾರ್ಕ ಹತ್ತಿರ ಇರುವ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು.

Leave a Reply