ನಿವೃತ್ತ ಸರ್ಕಾರಿ ಕಿರಿಯ ಅಭಿಯಂತರರಿಂದ ಅರ್ಜಿ ಆಹ್ವಾನ

2 years ago

#Applications #invited #retired #Government #Junior #Engineers #Urban #LocalBodies #Dharwad

ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಿವೃತ್ತ ಸರ್ಕಾರಿ ಕಿರಿಯ ಅಭಿಯಂತರರಿಂದ ಅರ್ಜಿ ಆಹ್ವಾನ

ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಕಲಘಟಗಿ, ಕುಂದಗೋಳ ಮತ್ತು ಅಳ್ನಾವರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ತಲಾ ಒಂದರಂತೆ ಒಟ್ಟು 04 ಕಿರಿಯ ಅಭಿಯಂತರ ಹುದ್ದೆಗಳನ್ನು. ರಾಜ್ಯ ಸರ್ಕಾರ, ರಾಜ್ಯ ಸರ್ಕಾರಿ ಸ್ವಾಮ್ಯದ ಅಥವಾ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಕಿರಿಯ ಅಭಿಯಂತರರುಗಳನ್ನು ಪುನರ್ ನೇಮಕಾತಿ ಮಾಡಿಕೊಳ್ಳುವ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 01 ರೊಳಗಾಗಿ ತಮ್ಮ ಸ್ವ-ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಧಾರವಾಡ ಇವರಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ ಕಚೇರಿ ವೇಳೆಯಲ್ಲಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಧಾರವಾಡ ಇವರನ್ನು ಖುದ್ದು ಭೇಟಿಯಾಗಿ ಪಡೆಯಬಹುದು.

Leave a Reply