18 ವರ್ಷ ಪೂರ್ಣಗೊಂಡ ಭಾಗ್ಯಲಕ್ಷ್ಮೀ ಯೋಜನೆ
ಧಾರವಾಡ: ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಗೆ ಒಳಪಡುವ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳು ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಧಾರವಾಡ ತಾಲ್ಲೂಕಿನಲ್ಲಿ 2006-07ನೇ ಸಾಲಿನಲ್ಲಿ ಜನಿಸಿ, 18 ವರ್ಷ ಪೂರ್ಣಗೊಂಡ ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯುವ ಫಲಾನುಭವಿಗಳು ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 30, 2025 ರೊಳಗಾಗಿ ಹುಬ್ಬಳ್ಳಿ ಧಾರವಾಡ ಶಹರ ಯೋಜನಾ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಖುದ್ದಾಗಿ ಬಂದು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.
ಅವಧಿ ಮುಗಿದ ಮೇಲೆ ಬಂದ ಅರ್ಜಿಗಳನ್ನು ಆನ್ಲೈಿನ್ನಿಲ್ಲಿ ಅಳವಡಿಸಲು ಸಾಧ್ಯವಾಗದ ಕಾರಣ ಪರಿಗಣಿಸುವುದಿಲ್ಲ ಎಂದು ಹುಬ್ಬಳ್ಳಿ ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.




