ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯಡಿ ಕಲ್ಯಾಣ ಕರ್ನಾಟಕ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ 5000 ರೂ. ಮೌಲ್ಯದ ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ 2000 ರೂ. ಮೌಲ್ಯದ ಉತ್ತಮ ಗುಣಮಟ್ಟದ ತರಕಾರಿ ಬೀಜಗಳನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರು ಪ್ರಸಕ್ತ ಸಾಲಿನ ಪಹಣಿ, ಆಧಾರ ಕಾರ್ಡ್ ಜಿರಾಕ್ಸ್, ಜಾತಿ ಪ್ರಮಾಣ ಪತ್ರ ಗಳೊಂದಿಗೆ ಆಯಾ ತಾಲ್ಲೂಕಿನ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಂಡೂರು, ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಬಹುದು.




