ಶ್ರೀಕೃಷ್ಣದೇವರಾಯ ವಿವಿ ಹಂಗಾಮಿ ಕುಲಪತಿ ನೇಮಕ

2 years ago

#Appointed #interim #chancellor #SrikrishnaDevarayaUniversity

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಹಾಗೂ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕ ಪ್ರೊ.ಅನಂತ್ ಎಲ್ ಝಂಡೇಕರ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.ಹಂಗಾಮಿ ಕುಲಪತಿಗೆ ಹಿಂದಿನ ಹಂಗಾಮಿ ಕುಲಪತಿಯಾಗಿದ್ದ ಡಾ.ಸಾಹೇಬ್ ಅಲಿ ಎಚ್ ನಿರಗುಡಿ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್.ಎಸ್.ಎನ್., ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್ ಓ ಓಲೇಕಾರ್, ವಿತ್ತಾಧಿಕಾರಿ ಪ್ರೊ.ಸದ್ಯೋಜಾಥಪ್ಪ ಈರ್ವರನ್ನು ಅಭಿನಂದಿಸಿದರು. ವಿಶ್ವವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

Leave a Reply