ಕಡೆಗೂ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ

2 years ago

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹುದ್ದೆ ಸಿಗಬಹುದು ಎಂದು ಕಾಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ನೀಡಿದ್ದಾರೆ.

ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಪ್ರಮುಖ ನಾಯಕರೊಂದಿಗೆ ಹಲವು ಸುತ್ತಿನ ಸಭೆ ನಡೆಸಿ, ಎಲ್ಲಾ ಲೆಕ್ಕಾಚಾರ ಹಾಕಿ ಇದೀಗ ಲೋಕಸಭೆ ಚುನಾವಣೆಗೂ ಮೊದಲೇ, 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿದ್ದಾರೆ.

ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿಎಂ ಮತ್ತು
ಉಪ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತರಲ್ಲಿ ಬಹುತೇಕ ಎಲ್ಲರಿಗೂ ಅಧಿಕಾರ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಗೆ ಖರ್ಗೆ ಅವರ ಕೆಲವು ಬೆಂಬಲಿಗರೂ ಕೂಡ ಸ್ಥಾನ ಗಿಟ್ಟಿಸಿದ್ದಾರೆ.

ಪ್ರಮುಖವಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕರಾಗಿ ಹಾಸ್ಯನಟ ಸಾಧು ಕೋಕಿಲ ಅವರನ್ನು ನೇಮಿಸಲಾಗಿದ್ದು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ನೇಮಿಸಲಾಗಿದೆ.

ಪೂರ್ಣ ಪಟ್ಟಿ:
ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
ಮುಂಡರಗಿ ನಾಗರಾಜು – ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಕಾರ ಉಪಾಧ್ಯಕ್ಷ
ಬಿ.ಹೆಚ್.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
ಡಾ.ಅಂಶುಮಂತ್ – ಭದ್ರಾ ಕಾಡಾ ಅಧ್ಯಕ್ಷ
ಜೆ.ಎಸ್.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ದೇವೇಂದ್ರಪ್ಪ ಮರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಎಸ್.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
ಹೆಚ್.ಸಿ.ಸುೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
ಡಾ.ನಾಗಲಕ್ಷ್ಮಿ ಚೌಧರಿ – ಕರ್ನಾಟಕ ರಾಜ್ಯ ಮಹಿಳಾ ಆಯೋಗ
ಎಚ್.ಎಸ್.ಸುಂದರೇಶ್- ಶಿವಮೊಗ್ಗ ನಗಾರಭಿವೃದ್ಧಿ ಪ್ರಾಧಿಕಾರ
ಎಂ.ಆರ್.ಮಂಜುನಾಥ್ – ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ
ಜಯಣ್ಣ – ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ
ಸಂಪತ್ ರಾಜ್ – ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ
ಪದ್ಮಾವತಿ – ಮಹಿಳಾ ಅಭಿವೃದ್ಧಿ ನಿಗಮ
ಶ್ರೀನಿವಾಸ್ – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಶಾಕಿರ್ ಸನದಿ – ಹುಬ್ಬಳ್ಳಿ, ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ
ಸೋಮಣ್ಣ ಬೇವಿನಮರದ – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ
ಮೆಹಬೂಬ್ ಪಾಷ – ಕಂಠೀರವ ಸ್ಟುಡಿಯೋ
ಕೀರ್ತಿ ಗಣೇಶ್ – ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ಮಜರ್‍ಖಾನ್ – ದೇವರಾಜ ಅರಸು ಟ್ರಕ್ ಟರ್ಮಿನಲ್
ಸವಿತಾ ರಘು – ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ
ಲಲಿತ್ ರಾಘವ್ – ಕರ್ನಾಟಕ ವಿದ್ಯುತ್ ಕಾರ್ಖಾನೆ
ಜಿ.ಎಸ್.ಮಂಜುನಾಥ್ – ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ
ಮಾಲಾ ನಾರಾಯಣ ರಾವ್ – ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ
ರಿಜ್ವಾನ್ – ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ
ಕೇಶವರೆಡ್ಡಿ – ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ
ತಾಜ್‍ಪೀರ್ – ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ
ಗಂಗಾಧರ್ – ಮೈಸೂರು ಸಕ್ಕರೆ ಕಾರ್ಖಾನೆ
ಅಲ್ತಾಫ್ – ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಕಾರ
ಮರಿಸ್ವಾಮಿ – ಮೈಸೂರು ಕಾಡಾ ಅಧ್ಯಕ್ಷ
ಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ
ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ
ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ

Leave a Reply