ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿ – ಐಜಿಪಿ)ರಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಅವರಿಗೆ ನೀಡಿರುವ ಹೆಚ್ಚುವರಿ ಜವಾಬ್ದಾರಿಯಾಗಿದ್ದು, ಸದ್ಯದಲ್ಲಿಯೇ ಪೂರ್ಣ ಪ್ರಮಾಣದ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಡಾ.ಎಂ.ಎ ಸಲೀಂ ಅವರನ್ನು ಪ್ರಭಾರ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕ ಮಾಡಿದ್ದನ್ನು ಪ್ರಶ್ನೆ ಮಾಡಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಈ ವಿಷಯ ತಿಳಿಸಿದರು.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಹುದ್ದೆ ನೇಮಕಕ್ಕೆ ಸರ್ಕಾರ ಸಂಭಾವ್ಯರ ಪಟ್ಟಿಯನ್ನು ಕೇಂದ್ರ ಲೋಕಸೇವಾ ಆಯೋಗಕ್ಕೆ ಕಳುಹಿಸಿದೆ. ಅಲ್ಲಿಂದ ಐಪಿಎಸ್ ಅಧಿಕಾರಿಗಳ ಆಯ್ಕೆ ಪಟ್ಟಿ ಬಂದ ಒಂದು ವಾರದೊಳಗೆ ರಾಜ್ಯ ಸರ್ಕಾರ ನಿಯಮಿತ ಡಿಜಿಪಿ ಅನ್ನು ನೇಮಿಸಲಿದೆ. ಆಗಸ್ಟ್ 26ರಂದು ಯುಪಿಎಸ್‌ಸಿ ಆಯ್ಕೆ ಸಮಿತಿ ಸಭೆ ನಡೆಸಿದೆ. ಶೀಘ್ರದಲ್ಲೇ ಅಂತಿಮ ಪಟ್ಟಿಯನ್ನು ಕಳುಹಿಸುವಂತೆ ರಾಜ್ಯ ಯುಪಿಎಸ್‌ಸಿಗೆ ಹೇಳಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
1993 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತರಾದ ನಂತರ ಡಿಜಿಪಿ ಆಗಿ ಅಧಿಕಾರ ವಹಿಸಿಕೊಂಡರು. ಡಾ. ಸಲೀಂ ಪ್ರಸ್ತುತ ಸಿಐಡಿಯ ಡಿಜಿಪಿ ಆಗಿದ್ದಾರೆ. ಇದರ ಜೊತೆಗೆ ರಾಜ್ಯದ ಡಿಜಿಪಿ ಮತ್ತು ಐಜಿಪಿಯ ಹೆಚ್ಚುವರಿ ಜವಾಬ್ದಾರಿಯನ್ನು ಸಹ ಹೊಂದಿದ್ದಾರೆ. ಹೈಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದೆ. ಸರ್ಕಾರ ಶೀಘ್ರದಲ್ಲೇ ಡಿಜಿಪಿ ಹುದ್ದೆಗೆ ನೇಮಕಾತಿ ಮಾಡುವುದಾಗಿ ಹೇಳಿದೆ. ಹಾಗಾಗಿ ಸದ್ಯಕ್ಕೆ ಡಾ. ಸಲೀಂ ಅವರೇ ಡಿಜಿಪಿ ಆಗಿ ಮುಂದುವರಿಯಲಿದ್ದಾರೆ ಎಂದು ವಿವರಿಸಿದರು.
ಅಡ್ವೋಕೇಟ್ ಜನರಲ್ ಅವರ ವಾದ ಆಲಿಸಿದ ನ್ಯಾಯ ಪೀಠ, ಸಲೀಂ ಅವರನ್ನು ಪ್ರಭಾರ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕ ಮಾಡಿದ್ದನ್ನು ಪ್ರಶ್ನೆ ಮಾಡಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿತು.




