ಅರ್ಜಿ ಆಹ್ವಾನ
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು, ತರಬೇತಿ ಅವಧಿಯಲ್ಲಿ ರೂ. 15,000 ಸ್ಟೆöÊಪಂಡ್ ನೀಡಲಾಗುವುದು.
ಅರ್ಜಿ ಸಲ್ಲಿಸಲು ಡಿಸೆಂಬರ್ 23 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರವಾರ ಉತ್ತರ ಕನ್ನಡ ಜಿಲ್ಲೆ ದೂರವಾಣಿ ಸಂಖ್ಯೆ: 9480841234 ನ್ನು ಸಂಪರ್ಕಿಸಬಹುದು.




