ಬೆಂಗಳೂರು: ಸಹಕಾರಿ ಸಂಘಗಳ ಮೂಲಕ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷದಿಂದ 5 ಲಕ್ಷದವರೆಗೆ ಸಾಲ ನೀಡಲು ಸಿಎಂ ಸಿದ್ದರಾಮಯ್ಯನವರ ಬಳಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ನಾವು ರಾಜ್ಯದ ಜನತೆಗೆ 3ರಿಂದ 5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ಭರವಸೆ ಕೊಟ್ಟಿದ್ದೆವು. ಅದರಂತೆ ನಮಗೆ ಜನ ಆಶೀರ್ವಾದ ಮಾಡಿದ್ದಾರೆ. ನುಡಿದಂತೆ ನಡೆದುಕೊಳ್ಳಲು ನಮ ಸರ್ಕಾರ ಬದ್ಧವಾಗಿದೆ ಎಂದರು.
ಪ್ರತಿಯೊಬ್ಬ ರೈತರಿಗೆ 3ರಿಂದ 5 ಲಕ್ಷದವರೆಗೆ ಸಾಲ ನೀಡಲು ಸಾಧ್ಯವಾಗುವುದಿಲ್ಲ. ಜಮೀನು ಲಭ್ಯತೆ, ಸಾಲ ಮರು ಪಾವತಿಸು ವ ರೈತರ ಸಾಮರ್ಥ್ಯ ಇವೆಲ್ಲವನ್ನೂ ನೋಡಿ ಸಾಲದ ಪ್ರಮಾಣವನ್ನು ನಿಗದಿಪಡಿಸಲಾಗುತ್ತದೆ ಎಂದರು.
ರೈತರಿಗೆ ಅಲ್ಪಾವಧಿ, ಮಧ್ಯಾವಧಿ ಮತ್ತು ದೀರ್ಘಾವಧಿ ಸಾಲವನ್ನು ನೀಡಲಾಗುತ್ತದೆ. ಅವರ ಯಾವ ಬೆಳೆಗಳಿಗೆ ಎಷ್ಟು ಪ್ರಮಾಣದ ಸಾಲ ನೀಡಬೇಕು ಎಂಬುದನ್ನು ಅಧಿಕಾರಿಗಳು ತೀರ್ಮಾನಿಸುತ್ತಾರೆ. ಬೆಳೆಗಳ ಸಾಮರ್ಥ್ಯ ಅನುಗುಣವಾಗಿ ನಾವು ಸಾಲ ವಿತರಿಸುತ್ತೇವೆ. ಅಪೆಕ್ಸ್ ಬ್ಯಾಂಕ್ ನೇರವಾಗಿ ಎಲ್ಲಿಯೂ ಸಾಲ ನೀಡುವುದಿಲ್ಲ. ಸಹಕಾರ ಸಂಸ್ಥೆಗಳ ಡೆಪಾಸಿಟ್ ಆಧಾರದ ಮೇಲೆ ಸಾಲ ವಿತರಣೆಯಾಗುತ್ತದೆ ಎಂದರು.
ರೈತರಿಗೆ 10 ಲಕ್ಷದವರೆಗೂ ಸಾಲ ನೀಡುವ ಗುರಿ ಹೊಂದಲಾಗಿದೆ. ನಮಗೆ ನಬಾರ್ಡ್‌ನಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಾಲಸೌಲಭ್ಯ ಸಿಗುತ್ತಿಲ್ಲ. ಪ್ರಸಕ್ತ ವರ್ಷ 936 ಕೋಟಿ ಸಾಲದ ಪ್ರಮಾಣವನ್ನು ಕಡಿತ ಮಾಡಲಾಗಿದೆ. ನಮಗೆ ಹೆಚ್ಚಿನ ಸಾಲವನ್ನು ನೀಡುವಂತೆ ಪ್ರಧಾನಿ, ಹಣಕಾಸು ಸಚಿವರು, ನಬಾರ್ಡ್ ಮುಖ್ಯಸ್ಥರಿಗೂ ಮನವಿ ಮಾಡಲಾಗಿದೆ ಎಂದರು.
ಕಳೆದ ವರ್ಷ ನಾವು ರೈತರಿಗೆ 5,600 ಕೋಟಿ ಸಾಲವನ್ನು ನೀಡಿದ್ದೇವೆ. ನಬಾರ್ಡ್‌ನವರು ಸಾಲದ ಪ್ರಮಾಣವನ್ನು ಕಡಿತ ಮಾಡಿದ್ದರಿಂದ ನಮ ಗುರಿ ತಲುಪಲು ಸಾಧ್ಯವಾಗಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದವರು ನಬಾರ್ಡ್‌ಗೆ ಸಾಲ ನೀಡುತ್ತಾರೆ. ಅವರು ಅಪೆಕ್ಸ್ ಬ್ಯಾಂಕ್‌ಗೆ ನೀಡುತ್ತಾರೆ. ಅಪೆಕ್ಸ್ ಬ್ಯಾಂಕ್‌ನವರು ವಿವಿಧ ಸಂಘಸಂಸ್ಥೆಗಳಿಗೆ ನೀಡುತ್ತಾರೆ ಎಂದರು.




