ಸಣ್ಣ ಉದ್ಯಮಿಗಳು ಸದುಪಯೋಗ ಪಡೆದುಕೊಳ್ಳಿ
ಬೆಂಗಳೂರು: ಆರ್ಯ ವೈಶ್ಯ ನಿಗಮದ ಮೂಲಕ ಕಳೆದ ವರ್ಷ 2023-24ರಲ್ಲಿ 800 ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸಣ್ಣ ಉದ್ಯಮಿಗಳಿಗೆ ಸಾಲ-ಸಹಾಯಧನ ನೀಡಲಾಗಿತ್ತು. ಈ ವರ್ಷವೂ ಸಹ ಈ ಎಲ್ಲಾ ಯೋಜನೆಗಳೂ ಮುಂದುವರೆಯಲಿದ್ದು, ಇಂದು ನಡೆದ ಸಭೆಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಬಗ್ಗೆ ಚರ್ಚಿಸಲಾಗಿದ್ದು, ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ನಿಗಮದ ಸಹಾಯದ ಅಗತ್ಯವಿರುವ ಅರ್ಹ ಸಣ್ಣ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಈ ಮೂಲಕ ತಿಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಆರ್ಯ ವೈಶ್ಯ ನಿಗಮದ ವಿವಿಧ ಯೋಜನೆಗಳು ಈ ಕೆಳಗಿನಂತಿವೆ:
ಆರ್ಯ ವೈಶ್ಯ ನಿಗಮದ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 03 ಯೋಜನೆಗಳಾದ 1) ಸ್ವಯಂ-ಉದ್ಯೋಗ ನೇರಸಾಲ ಯೋಜನೆ, 2) ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ ಮತ್ತು 3) ವಾಸವಿ ಜಲಶಕ್ತಿ ಯೋಜನೆಗಳಿಗೆ ಅರ್ಜಿಗಳನ್ನು ದಿ: 12.07.2024ರಿಂದ Online ಮೂಲಕವೇ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿ: 31.08.2024ರಂದಾಗಿರುತ್ತದೆ.
ಎಲ್ಲಾ ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ 9448451111 ಅನ್ನು ಸಂಪರ್ಕಿಸಲು ತಿಳಿಸಿದೆ.
ಸ್ವಯಂ-ಉದ್ಯೋಗ ನೇರಸಾಲ ಯೋಜನೆ:
ಈ ವರ್ಷ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ ರೂ.1.00ಲಕ್ಷಗಳ ಸಾಲ-ಸಹಾಯಧನ ನೀಡಲಾಗುತ್ತಿದ್ದು, ಇದರಲ್ಲಿ ರೂ.20,000/-ಗಳ ಸಹಾಯಧನವಿರುತ್ತದೆ. ಹಾಗೂ ಬಾಕಿ ಮೊತ್ತವನ್ನು ಶೇ.4%ರ ಬಡ್ಡಿದರದಲ್ಲಿ ನೀಡಲಾಗುವುದು.
ಹಲವಾರು ವರ್ಷಗಳ ಬೇಡಿಕೆಯಂತೆ ಈ ಯೋಜನೆಯಲ್ಲಿ ವಯೋಮಿತಿಯನ್ನು 45 ವರ್ಷಗಳಿಂದ 55 ವರ್ಷಗಳಿಗೆ ಹೆಚ್ಚಿಸಲಾಗಿದೆ. ಈ ಬಾರಿ 2019/20 ಮತ್ತು 2020/21 ಸಾಲಿನ ಫಲಾನುಭವಿಗಳು ಪಡೆದ ಸಾಲವನ್ನು ನಿಗದಿತ ಕಾಲಮಿತಿಯೊಳಗೆ ಮರುಪಾವತಿಸಿದಲ್ಲಿ ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಆರ್ಯ ವೈಶ್ಯ ವಾಹಿನಿ/ಆಹಾರ ವಾಹಿನಿ ಯೋಜನೆ:
ಈ ಬಾರಿ ಆರ್ಯ ವೈಶ್ಯ ವಾಹಿನಿ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಲ್ಲಿ ಅಭ್ಯರ್ಥಿಯು Yellow board ಉಳ್ಳ ಆಟೋ, ಟ್ರಕ್, ಕಾರ್ ಇತ್ಯಾದಿಯನ್ನು ಖರೀದಿಸಬಹುದು. ಅರ್ಜಿದಾರರು ಯಾವುದಾದರೂ ಬ್ಯಾಂಕ್‍ನಲ್ಲಿ ಸಾಲ ಪಡೆಯಬಹುದು ಹಾಗೂ ನಿಗಮದಿಂದ ರೂ.1.00ಲಕ್ಷಗಳವರೆಗೆ Subsidyಯನ್ನು ನೀಡಲಾಗುವುದು. ಮುಂದುವರೆದು, ಅರ್ಜಿದಾರರು ವಾಹನವನ್ನು Fabrication ಮಾಡಿಸಿ ಮೊಬೈಲ್ ಕ್ಯಾಂಟೀನ್ ಆಗಿ ಪರಿವರ್ತಿಸಿದ್ದಲ್ಲಿಹೆಚ್ಚುವರಿಯಾಗಿ ರೂ.1.00ಲಕ್ಷಗಳ ಸಹಾಯಧನವನ್ನು ನೀಡಲಾಗುವುದು.
ವಾಸವಿ ಜಲಶಕ್ತಿ ಯೋಜನೆ:
ನಿಗಮದ ವತಿಯಿಂದ ಸಣ್ಣ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ವಾಸವಿ ಜಲಶಕ್ತಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ರೈತರು ಕನಿಷ್ಠ 2 ರಿಂದ ಗರಿಷ್ಠ 15 ಎಕರೆ ಜಮೀನು ಹೊಂದಿರಬೇಕು ಹಾಗೂ ಈ ಬಾರಿ ವಯೋಮಿಯನ್ನು 50 ರಿಂದ 55ರವರೆಗೆ ಹೆಚ್ಚಿಸಲಾಗಿದೆ. ಈ ಯೋಜನೆಯಲ್ಲಿ ಶೇ.4 ರಷ್ಟು ಬಡ್ಡಿದರದಲ್ಲಿ ರೂ.2.00ಲಕ್ಷಗಳ ಸಾಲ ಹಾಗೂ ವಿದ್ಯುದ್ಧೀಕರಣಕ್ಕಾಗಿ ರೂ.50,000/-ಗಳ ಸಹಾಯಧನವನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.




