ಕರ್ನಾಟಕದ ಸುಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ಗೆ ಬ್ರಾಂಡ್ ಅಂಬಾಸಿಡರ್ ನೇಮಿಸಲು ನಮ್ಮದೇ ಕನ್ನಡ ನಾಡಿನ ಅನೇಕ ತಾರೆಗಳು ಇದ್ದರೂ ಪರರಾಜ್ಯದ, ಅನ್ಯಭಾಷೆಯ ಸಿನಿಮಾ ನಟಿಯೊಬ್ಬರನ್ನು ಕೋಟ್ಯಂತರ ರೂಪಾಯಿ ಪೇಮೆಂಟ್ ಕೊಟ್ಟು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ಕನ್ನಡ ವಿರೋಧಿ ಮನಸ್ಥಿತಿಗೆ ಮತ್ತೊಂದು ಸಾಕ್ಷಿ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕನ್ನಡ ಸಿನಿ ತಾರೆಯರಾದ ರಮ್ಯಾ, ರಶ್ಮಿಕಾ ಮಂದಣ್ಣ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ಡೆ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕ ನಟಿಯರು ಇವತ್ತು ಅನೇಕ ಭಾಷೆಗಳ ಚಿತ್ರರಂಗದಲ್ಲಿ ಬೇಡಿಕೆಯುಳ್ಳ ಜನಪ್ರಿಯ ನಟಿಯರಾಗಿ ಕನ್ನಡದ ಕೀರ್ತಿ ಪತಾಕೆಯನ್ನ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ.
ನಮ್ಮದೇ ಕನ್ನಡ ನಾಡಿನ ನಟಿಯರನ್ನು ಬಿಟ್ಟು ಬೇರೆಯವರಿಗೆ ಮಣೆ ಹಾಕುವ ಕಾಂಗ್ರೆಸ್ ಪಕ್ಷದ ಧೋರಣೆ ಕನ್ನಡ ನಾಡಿನ ಪ್ರತಿಭೆಗಳಿಗೆ ಮಾಡಿರುವ ಅಮಪಾನ ಮಾತ್ರವಲ್ಲ, ಮೈಸೂರು ಸ್ಯಾಂಡಲ್ ಸೋಪಿನ ಅಸ್ಮಿತೆಗೂ ಮಾಡಿರುವ ಘೋರ ಅಪಮಾನ.
ಈ ಕನ್ನಡ ವಿರೋಧಿ, ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ.
– ಡಾ.ಕೆ.ಸುಧಾಕರ್, ಸಂಸದ






