ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಕಿ ಉಳಿದಿರುವ ಕಾಮಗಾರಿಗಳು, ನಾಲೆಗಳ ಆಧುನೀಕರಣ, ನಿರ್ಮಾಣ ಮತ್ತು ಭೂಸ್ವಾಧೀನ ಪ್ರಕ್ರಿಯೆಗಳ ಕುರಿತಂತೆ ಚರ್ಚೆ ನಡೆಸಲು ಜಲಾನಯನ ಪ್ರದೇಶ ವ್ಯಾಪ್ತಿಯ ಎಲ್ಲಾ ಶಾಸಕರು, ರೈತ ಮುಖಂಡರು ಮತ್ತು ಮಂತ್ರಿಗಳೊಂದಿಗೆ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಸಭೆ ನಡೆಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸಭೆಗೂ ಮುನ್ನ ರೈತರ ಭೂಮಿಗೆ ಪರಿಹಾರ ನೀಡುವ ವಿಚಾರವಾಗಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಮತ್ತು ಡಿ ಕೆ ಶಿವಕುಮಾರ್ ಅವರ ನಡುವೆ ತೀವ್ರ ಸ್ವರೂಪದ ಮಾತಿನ ಚಕಮಕಿ ನಡೆಯಿತು.
ರೈತರ ಸಮ್ಮುಖದಲ್ಲಿ ಸಚಿವ ತಿಮ್ಮಾಪುರ ಅವರನ್ನು ಶಿವಕುಮಾರ್ ತರಾಟೆಗೆ ತೆಗೆದುಕೊಂಡರೆ, ಅದಕ್ಕೆ ತಿರುಗೇಟು ನೀಡಿದ ತಿಮ್ಮಾಪುರ ನಾನು ರೈತರ ಪರವಾಗಿ ಮಾತನಾಡುತ್ತಿದ್ದೇನೆ. ಇಲಾಖೆಯ ಮುಖ್ಯಸ್ಥರಾಗಿ ನೀವು ನಿಮಗೆ ತೋಚಿದಂತೆ ತೀರ್ಮಾನ ತೆಗೆದುಕೊಳ್ಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಭೆ ಕರೆದಿರುವುದು ರೈತರ ಅಭಿಪ್ರಾಯ ಕೇಳಲು. ರೈತರು ತಮ್ಮ ಅಭಿಪ್ರಾಯಗಳನ್ನು ಹೇಳಲಿ. ಮಂತ್ರಿಗಳಾಗಿ ಆನಂತರ ನೀವು ನಿಮ್ಮ ಸಲಹೆ ಕೊಡಿ. ಅದನ್ನು ಬಿಟ್ಟು ನೀವೇ ಪ್ರತಿ ಎಕರೆಗೆ ಇಷ್ಟೇ ದುಡ್ಡು ಕೊಡಬೇಕು ಎಂದು ತಾಕೀತು ಮಾಡುವುದು ಸರಿಯಲ್ಲ ಎಂದು ಹೇಳಿದ ಶಿವಕುಮಾರ್ ನಂತರ ರೈತರ ಅಭಿಪ್ರಾಯ ಕೇಳಿದರು.




