ಧಾರವಾಡ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಎಲ್ಲ ಬಗೆಯ ಆಯುಧ ಲೈಸನ್ಸ್ದಾರರು ತಮ್ಮ ಆಯುಧಗಳನ್ನು ತಮ್ಮ ಪೊಲೀಸ್ ಠಾಣೆಯ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಠೇವಣಿ ಇಡತಕ್ಕದ್ದು ಎಂದು ಹುಬ್ಬಳ್ಳಿ – ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಆದೇಶಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಚುನಾವಣಾ ನೀತಿ ಸಂಹಿತೆ ಪೂರ್ಣಗೊಳ್ಳುವವರೆಗೆ ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಪರವಾನಿಗೆ ಹೊಂದಿದ ಆಯುಧ ಲೈಸನ್ಸ್ದಾರರು ತಮ್ಮ ಆಯುಧಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಶಸ್ತ್ರಾಸ್ತ್ರಗಳನ್ನು ತಕ್ಷಣವೇ ಠೇವಣಿ ಮಾಡಲು ವಿಫಲರಾದ ಆಯುಧ ಲೈಸನ್ಸ್ದಾರರ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕ್ರಿಯೆ 1860 ರ ಸೆಕ್ಷನ್ 188 ರ ಅಡಿಯಲ್ಲಿ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದಿದ್ದಾರೆ.
ಆದಾಗ್ಯೂ ಈ ಆದೇಶ ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಸರಕಾರಿ ಅಧಿಕಾರಿ, ಸಿಬ್ಬಂದಿ ಮತ್ತು ಬ್ಯಾಂಕ್, ಇತರ ಖಾಸಗಿ ಹಣಕಾಸು ಸಂಸ್ಥೆಗಳು, ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಈ ಆದೇಶದಿಂದ ಯಾರಾದರೂ ಲೈಸನ್ಸ್ದಾರರು ವಿನಾಯತಿ ಪಡೆಯಬೇಕಾದ್ದಲ್ಲಿ ಸೂಕ್ತ ಸಮರ್ಥನೀಯ ಕಾರಣದೊಂದಿಗೆ ಮಾರ್ಚ್ 22, 2024 ರ ಒಳಗಾಗಿ ಸದಸ್ಯ ಕಾರ್ಯದರ್ಶಿಗಳು, ಶಸ್ತ್ರಾಸ್ತ್ರ, ಸ್ಕ್ರೀನಿಂಗ್ ಸಮೀತಿ ಹುಬ್ಬಳ್ಳಿ-ಧಾರವಾಡ ನಗರ ರವರಿಗೆ ಅರ್ಜಿಯನ್ನು ಸಲ್ಲಿಸಬಹುದು. ಮಾರ್ಚ್ 22 ರ ನಂತರ ಸ್ವೀಕೃತಗೊಂಡ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಈ ಆದೇಶವನ್ನು ತಕ್ಷಣದಿಂದ ಜಾರಿಗೆ ಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.




