ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಒಳನುಸುಳುಕೋರರು ಗುರುವಾರ ರಾತ್ರಿ ಗಡಿ ನಿಯಂತ್ರಣ ರೇಖೆ ಬಳಿ ನಡೆಸಿದ ಒಳ ನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ತಡೆದಿದೆ. ಪೂಂಚ್ ಸೆಕ್ಟರ್ನ ಎಲ್ ಒ ಸಿ ಬಳಿ ಉಗ್ರರು ಪ್ರವೇಶಿಸಲು ಯತ್ನಿಸಿದ್ದರು. ಇದನ್ನು ನಮ್ಮ ಸೇನೆ ವಿಫಲಗೊಳಿಸಿದೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ.
ಬುಧವಾರ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶೇರ್‌ಬಾಗ್‌ನಲ್ಲಿರುವ ಪೊಲೀಸ್ ಠಾಣೆ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದರು. ಈ ನಡುವೆ ಭಾರತೀಯ ಗುಪ್ತಚರ ಸಂಸ್ಥೆಗಳು ಭಯೋತ್ಪಾದಕರು ಒಳನುಸುಳುವ, ಕಾಶ್ಮೀರದಲ್ಲಿ ಸಂಚು ರೂಪಿಸುವ ಶಂಕೆ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಸೇನೆ ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಸೂಚನೆ ನೀಡಿದ್ದಾರೆ.




