ಬೆಂಗಳೂರು: ಹಗಲಿನಲ್ಲಿ ಇವರು ಮಾಡುವ ಕಾಯಕ ಬಲೂನ್ ಮಾರಾಟ. ರಾತ್ರಿ ಆದರೆ ಸಾಕು ಇವರು ಮಾಡುವ ಕೆಲಸ ದರೋಡೆ. ರಾಜಸ್ಥಾನ ಮೂಲದ ಈ ಖತರ್ನಾಕ್ ಕಳ್ಳರನ್ನು ಬಂಧಿಸಿರುವ ಬೆಂಗಳೂರು ಪೊಲೀಸರು ಹಲವು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹಗಲಿನಲ್ಲಿ ಬಲೂನು ಮಾರಾಟ ಮಾಡುತ್ತಿದ್ದ ಇವರು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ರಾತ್ರಿ ಆದರೆ ಸಾಕು ಅಂತ ಮನೆಗಳ ಬೀಗ ಹೊಡೆದು ಒಳಗೆ ನುಗ್ಗಿ ಕಳವು ಮಾಡಿ ಪರಾರಿಯಾಗುತ್ತಿದ್ದರು.
ರಾಜಸ್ಥಾನದ ದೋಸಾ ಜಿಲ್ಲೆಯ ರಾಜೇಶ್ (42), ಆಜ್ಮೀರ್ ಜಿಲ್ಲೆಯ ಕರಮ್‍ವೀರ್(20) ಹಾಗೂ ಸುರೇಶ್ ಅಲಿಯಾಸ್ ಕರಣ್(22) ಎಂಬುವರನ್ನು ಬಂಧಿಸಿರುವ ಸುಬ್ರಮಣ್ಯನಗರ ಪೊಲೀಸರು, 5 ಲಕ್ಷ ಮೌಲ್ಯದ 35 ಗ್ರಾಂ ಚಿನ್ನ 1 ಕೆಜಿ 761 ಗ್ರಾಂ ಬೆಳ್ಳಿ ವಸ್ತುಗಳನ್ನು ಜಪ್ತಿಮಾಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಮಾಹಿತಿ ನೀಡಿದರು.
ಫೆ.20ರಂದು ಸುಬ್ರಮಣ್ಯನಗರ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿ ಕೊಠಡಿಯ ಬೀರುವಿನಲ್ಲಿಟ್ಟಿದ್ದ 35 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ 761 ಗ್ರಾಂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣ ದಾಖಲಿಸಿ ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಶ್ರೀರಾಂಪುರ ಮೆಟ್ರೋ ನಿಲ್ದಾಣದ ಬಳಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




