ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ಇತ್ತೀಚೆಗೆ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದ ಬೆನ್ನಲ್ಲೇ ಇದೀಗ ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಪಾಕಿಸ್ತಾನಿ ಪ್ರಜೆಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ದೇಶದ ವಿವಿಧ ರಾಜ್ಯಗಳಲ್ಲಿ ಪಾಕ್ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆಗಿಳಿಸಲಾಗಿತ್ತು.
ಈ ತಂಡಗಳು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಹೈದ್ರಾಬಾದ್, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನೀಯರನ್ನು ಪತ್ತೆ ಹಚ್ಚಿ ಬಂಧಿಸಿವೆ. ದೆಹಲಿಯಲ್ಲಿ 5 ಮಂದಿ, ಹೈದ್ರಾಬಾದ್ – ಇಬ್ಬರು, ಉತ್ತರ ಪ್ರದೇಶ – ಇಬ್ಬರು, ರಾಜಸ್ಥಾನದಲ್ಲಿ ಮೂವರು ಪಾಕಿಸ್ತಾನೀಯರನ್ನು ಬಂಧಿಸಿ ನಗರಕ್ಕೆ ಕರೆತಂದು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಇನ್ನಷ್ಟು ಮಾಹಿತಿಗಳನ್ನು ತನಿಖಾ ತಂಡಗಳು ಕಲೆ ಹಾಕುತ್ತಿವೆ.
ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಹಿಂದೂ ಹೆಸರಿಟ್ಟುಕೊಂಡು ನೆಲೆಸಿದ್ದ ಪಾಕ್ ಪ್ರಜೆಗಳ ಬಂಧನದ ನಂತರ ವಿಚಾರಣೆ ಸಂದರ್ಭದಲ್ಲಿ ಅವರು ನೀಡಿದ ಮಾಹಿತಿಗಳನ್ನು ಆಧರಿಸಿ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ದೇಶಾದ್ಯಂತ ಸಕ್ರಿಯರಾಗಿದ್ದ ಪಾಕಿಸ್ತಾನಿಯರನ್ನು ಬಂಧಿಸಿದ್ದಾರೆ.
12 ಪಾಕಿಸ್ತಾನಿಯರಲ್ಲದೆ ಇನ್ನಷ್ಟು ಪಾಕ್ ಪ್ರಜೆಗಳ ಜಾಲವೇ ದೇಶದಲ್ಲಿ ವಿಸ್ತರಿಸಿರುವ ಆತಂಕ ಎದುರಾಗಿದ್ದು, ಬಂಧಿತರ ವಿಚಾರಣೆಯಿಂದ ಒಂದೊಂದಾಗಿ ಇನ್ನಷ್ಟು ಮಾಹಿತಿ ಹೊರಬೇಕಾಗಿದೆ.




