ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸವರ್ಷದ ಭರ್ಜರಿ ತಯಾರಿ ಆರಂಭಗೊಂಡಿದೆ. ಸಂಭ್ರಮಾಚರಣೆ ಹೆಸರಿನಲ್ಲಿ ಹಲವು ಕಡೆ ಡ್ರಗ್ಸ್ ಪಾರ್ಟಿ ಆಯೋಜಿಸಲಾಗುತ್ತಿದೆ ಎಂಬ ಮಾಹಿತಿ ನಗರ ಪೊಲೀಸರನ್ನು ತಲುಪಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಾಹಿತಿ ಆಧರಿಸಿ ಡ್ರಗ್ಸ್ ವಿರುದ್ಧ ಸಮರ ಸಾರಿರುವ ಪೊಲೀಸರು ಎರಡು ಪ್ರತ್ಯೇಕ ಕಡೆಗಳಲ್ಲಿ ಕಾರ್ಯಾಚರಣೆ ಕೈಗೊಂಡು 7 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 79.6 ಲಕ್ಷ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಸಿಸಿಬಿ ಪೊಲೀಸರು ಕುಮಾರಸ್ವಾಮಿ ಲೇಔಟ್ ನ ಫಯಾಜ್ (28) ನಾಗರಬಾವಿಯ ಗೌತಮ್(35) ಹಾಗೂ ಜೈಲಿನಲ್ಲಿದ್ದ ಅಮೀರ್ ಖಾನ್ ಎಂಬುವವರನ್ನು ಬಂಧಿಸಿ, 71 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಮತ್ತೊಂದೆಡೆ ಕೊಡಿಗೇಹಳ್ಳಿ ಪೊಲೀಸರು ನಾಲ್ವರನ್ನು ಬಂಧಿಸಿ 8.6 ಲಕ್ಷ ಮೌಲ್ಯದ 8 ಕೆ.ಜಿ 600 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದರು.
ಕುಮಾರಸ್ವಾಮಿ ಲೇಔಟ್ನ ಚಂದ್ರಾನಗರದ ಮನೆಯೊಂದರಲ್ಲಿಟ್ಟಿದ್ದ ಮಾದಕ ವಸ್ತುಗಳಾದ 15.5 ಗ್ರಾಂ ಎಂಡಿಎಂಎ ಕ್ರಿಸ್ಟಲ್, 520 ಗ್ರಾಂ ಹೈಡ್ರೋ ಗಾಂಜಾ, 2 ಕೆ.ಜಿ 223 ಗ್ರಾಂ ಗಾಂಜಾ, ತೂಕದ ಯಂತ್ರ, ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದರು.
ವಿಚಾರಣೆಯಲ್ಲಿ ಕೇರಳ ರಾಜ್ಯದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತಗಳನ್ನು ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾರೆ. ಇವರಿಗೆ ಜೈಲಿನಲ್ಲಿರುವ ಅಮೀರ್ ಖಾನ್ ಎಂಬಾತ ಫೋನ್ ಮುಖಾಂತರ ಮಾಹಿತಿಯನ್ನು ನೀಡುತ್ತಿದ್ದು, ಆತ ನೀಡಿದ ಮಾಹಿತಿ ಮೇರೆಗೆ, ಆ ಸ್ಥಳಕ್ಕೆ ತೆರಳಿ ನಿಷೇಧಿತ ಮಾದಕ ವಸ್ತುಗಳನ್ನು ಪಡೆದುಕೊಂಡು ಹೆಚ್ಚಿನ ಬೆಲೆಗೆ ಫೋರ್ಟರ್ ಮೂಲಕ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ ಎಂದರು.
ನಿಷೇಧಿತ ಮಾದಕ ವಸ್ತುಗಳನ್ನು, ಸಿಲ್ವರ್ ಜ್ಯೂಬಿಲಿ ಸ್ಕೂಲ್ ರಸ್ತೆ, ಪಾಪರೆಡ್ಡಿ ಪಾಳ್ಯದಲ್ಲಿ ವಾಸವಿರುವ ಆತನ ಮನೆಯಲ್ಲಿಟ್ಟಿರುವುದಾಗಿ ತಿಳಿಸಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದರು.
ಕೊಡಿಗೇಹಳ್ಳಿ ಪೊಲೀಸರು ಕೊಡಿಗೇಹಳ್ಳಿಯ ಅಜಿತ್,ಯಶವಂತಪುರದ ಕಾರ್ತಿಕ್ ಕುಮಾರ್, ರಾಖೇಶ್ ನಾಯ್ಕ್ ಹಾಗೂ ಕಾರ್ತಿಕ್ ನನ್ನು ಬಂಧಿಸಿ 8.6 ಲಕ್ಷ ಮೌಲ್ಯದ 8 ಕೆ.ಜಿ 600 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ವಶಪಡಿಸಿಕೊಂಡಿದ್ದಾರೆ ಎಂದರು.
ಕಳೆದ ಡಿಸೆಂಬರ್ 3 ರಂದು ಕೊಡಿಗೇಹಳ್ಳಿಯ ಟಾಟಾ ನಗರ ಎನ್ ಟಿ ಐಗೌಂಡ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿಯ ಮೇರೆಗೆ ಕೊಡಿಗೇಹಳ್ಳಿ ದಾಳಿ ಮಾಡಿ, ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳ ಪತ್ತೆಕಾರ್ಯ ಮುಂದುವರೆದಿದೆ ತನಿಖೆ ಪ್ರಗತಿಯಲ್ಲಿದೆ ಎಂದರು.




