ಬೆಂಗಳೂರು: ಮಾದಕವಸ್ತು ಮಾರಾಟ ಸಾಗಾಣಿಕೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಈಶಾನ್ಯ ವಿಭಾಗದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿ ಮಹಿಳೆ ಸೇರಿ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿ 70 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಘಾನಾ ದೇಶದ ಅದ್ಮ್ಯಾಕೋ ಬ್ರೈಟ್ ಹಾಗು ಎನ್ಕೆಟೈ ಕೋಫಿ ಬಂಧಿತ ಆರೋಪಿಗಳಾಗಿದ್ದು, ಇವರಿಂದ 70 ಲಕ್ಷ ರೂ.ಮೌಲ್ಯದ 700 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಸಜೀತ್ ತಿಳಿಸಿದ್ದಾರೆ.
ಯಲಹಂಕದ ದೊಡ್ಡಬೆಟ್ಟಹಳ್ಳಿಯಲ್ಲಿ ಎಂಡಿಎಂಎ ಶೇಖರಿದ್ದ ಮಾಹಿತಿ ಆಧರಿಸಿ ಯಲಹಂಕ ಉಪನಗರ ಪೊಲೀಸರು ಮಹಿಳೆ ಸೇರಿ ಇಬ್ಬರು ಘಾನಾ ದೇಶದ ಪ್ರಜೆಗಳನ್ನು ಬಂಧಿಸಿ ಸುಮಾರು 70 ಲಕ್ಷ ಮೌಲ್ಯದ 700 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ವಿಚಾರಣೆ ವೇಳೆ ನೀಡಿದ ಮಾಹಿತಿಯನ್ನು ಆಧರಿಸಿ ಗುಂಜೂರು, ವರ್ತೂರು, ಬೇಗೂರು ಕೊಪ್ಪ ರಸ್ತೆ, ಗಾಂಧೀಪುರ ವೈಟ್ ಫೀಲ್ಡ್, ಕೆ.ಆರ್.ಪುರಂ ನ ಮಾರಗೊಂಡನಹಳ್ಳಿ, ಈಜಿಪುರ, ಸಂಜಯ ನಗರ, ಎಂ.ಎಸ್.ಪಾಳ್ಯ ಸೇರಿದಂತೆ 7 ಕಡೆಗಳಲ್ಲಿ ದಾಳಿ ನಡೆಸಿ ಒಟ್ಟು 9 ಜನ ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆದಿದ್ದು ಅದರಲ್ಲಿ ಇಬ್ಬರು ವಿದೇಶಿ ಮಹಿಳೆಯರ ಮನೆಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.
ಅವರಿಂದ 547ಗ್ರಾಂ ಕೊಕೇನ್ ,43 ಗ್ರಾಂ ಅಂಪಟಮಿನ್ 40ಗ್ರಾಂ ಗಾಂಜಾ,201ಗ್ರಾಂ ಕ್ರಿಸ್ಟಲ್ 87,100 ರೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ದಾಳಿ ಸಮಯದಲ್ಲಿ ಅವಧಿ ಮೀರಿ ವಾಸವಾಗಿದ್ದ ಅನುಮಾನಾಸ್ಪದ ಚಟುವಟಿಕೆಗಳಲ್ಲಿ ತೊಡಗಿದ್ದ 7 ವಿದೇಶಿ ಪ್ರಜೆಗಳನ್ನು ಮುಂದಿನ ಕ್ರಮಕ್ಕಾಗಿ ಎಫ್ಆರ್ ಆರ್ ಓ ರವರ ಮುಂದೆ ಹಾಜರುಪಡಿಸಿದ್ದು ಸ್ವದೇಶಕ್ಕೆ ಕಳುಹಿಸಲು ಕ್ರಮವಹಿಸಲಾಗಿದೆ ಎಂದರು.
ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಕೃಷ್ಣಮೂರ್ತಿ ಎಂ.ಎಲ್, ಶಿವಸ್ವಾಮಿ ಸಿ.ಬಿ, ಮುತ್ತುರಾಜು ಅವರ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸಿ ಡ್ರಗ್ಸ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.




