ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಬಾಂಗ್ಲಾ ಪ್ರಜೆಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗದ ಕಾನ್ಸ್‌ಟೇಬಲ್ ಪ್ರಶಾಂತ್ ನಾವಿ ಹಾಗೂ ಮತ್ತೋರ್ವ ಖಾಸಗಿ ವ್ಯಕ್ತಿ ನಾಸೀರ್ ಖಾನ್ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರನ್ನು ತೀವ್ರ ವಿಚಾರಣೆ ನಡೆಸಲಾಗಿದೆ.
ಈ ಹಿಂದೆ ರಾಜ್ಯ ಆಂತರಿಕ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ನಾವಿಯನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಮಾಡಲಾಗಿತ್ತು. ಅಮಾನತು ರದ್ದಾದ ಬಳಿಕ ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ವೇಳೆ ಆತ ಅಪರಾಧಿಕ ಹಿನ್ನೆಲೆಯ ನಾಸೀರ್ ಖಾನ್ ಜೊತೆ ಕೈಜೋಡಿಸಿದ್ದ.
ಈತನೊಂದಿಗೆ ಸೇರಿ ಕಸ ಸಂಗ್ರಹಣೆ ಮಾಡುವ ಬಾಂಗ್ಲಾ ಪ್ರಜೆಗಳನ್ನು ಗುರಿಯಾಗಿಸಿಕೊಂಡ ಆರೋಪಿಗಳು, ಅವರನ್ನು ಬಂಧಿಸುವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದರು. ಕೆಲವರನ್ನ ಬಂಧನದ ನೆಪದಲ್ಲಿ ಕರೆದೊಯ್ದು, ಹಣ ವಸೂಲಿ ಮಾಡಿರುವುದು ಸಹ ತನಿಖೆ ಸಂದರ್ಭದಲ್ಲಿ ಕಂಡು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.




