ಬೆಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಬಸವನಗುಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ದುನಿಯಾ ಜಿಲ್ಲೆಯ ಅನಿಲ್(23)ಆರ್ ಟಿನಗರದ ಸೈಯದ್ ಸುಬಾನ್ ಅಲಿಯಾಸ್ ಶೂಟರ್ ಸುಬಾನ್(29)ಬಂಧಿತ ಆರೋಪಿಗಳಾಗಿದ್ದು, ಅವರಿಂದ 11.77 ಸಾವಿರ ಮೌಲ್ಯದ 47 ಕೆಜಿ 100 ಗ್ರಾಂ ಗಾಂಜಾ, ನಗದು ಹಾಗೂ 2 ಮೊಬೈಲ್ ಪೋನ್ಗಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದರು.
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
ಬಸವನಗುಡಿಯ ಮಲ್ಲಿಕಾರ್ಜುನ ದೇವಸ್ಥಾನದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡ ಜಯನಗರ ಉಪ ವಿಭಾಗದ ಎಸಿಪಿ ನಾರಾಯಣಸ್ವಾಮಿ ನೇತೃತ್ವದ ಬಸವನಗುಡಿ ಪೊಲೀಸ್ ಇನ್ಸ್ ಪೆಕ್ಟರ್ ಸವಿತ ಮತ್ತವರ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.




