ಕೊಲೆ ಪ್ರಕರಣದ ಆರೋಪಿಗಳನ್ನು ಮುಲಾಜಿಲ್ಲದೇ ಬಂಧಿಸಿ ಕಾನೂನು ಕ್ರಮ: ಜಿ.ಪರಮೇಶ್ವರ್

1 year ago

ಬೆಂಗಳೂರು: ಚಿತ್ರದುರ್ಗದ ವಸತಿ ನಿಲಯದ ಪದವಿ ವಿದ್ಯಾರ್ಥಿನಿಯ ಬರ್ಬರ ಕೊಲೆ ಪ್ರಕರಣದ ಆರೋಪಿಗಳನ್ನು ಮುಲಾಜಿಲ್ಲದೇ ಬಂಧಿಸಿ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ಸದಸ್ಯ ನವೀನಕುಮಾರ ಸೇರಿ ಇನ್ನಿತರರು ಚಿತ್ರದುರ್ಗದಲ್ಲಿ ನಡೆದ ಪದವಿ ವಿದ್ಯಾರ್ಥಿನಿಯ ಬರ್ಬರ ಕೊಲೆ ಕೃತ್ಯವನ್ನು ಪ್ರಸ್ತಾಪಿಸಿದರು.

ಈ ರೀತಿಯ ಘಟನೆಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಹಾಸ್ಟೆಲ್ಗೂ ಕಳುಹಿಸಲು ಭಯಪಡುವಂತಾಗಿದೆ, ಸರ್ಕಾರ ಈ ರೀತಿಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಜೊತೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ, ಈ ಘಟನೆ ಸಂಬಂಧ ಆರೋಪಿಗಳ ಮೇಲೆ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು. ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದರು.

Leave a Reply