ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವ ಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ದಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಾಲ ಪ್ರತಿಭೆ (8 ರಿಂದ 14 ವರ್ಷವಯೋಮಾನ), ಕಿಶೋರ ಪ್ರತಿಭೆ (14 ರಿಂದ 18 ವರ್ಷವಯೋಮಾನ), ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜಾನಪದ ಗೀತೆ, ಹಿಂದೂಸ್ತಾನಿ/ಕರ್ನಾಟಕ ವಾದ್ಯ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಭಾಗವಹಿಸಬಹುದು.
ಯುವ ಪ್ರತಿಭೆ (18 ರಿಂದ 30 ವರ್ಷ ವಯೋಮಾನ): ನನ್ನ ನೆಚ್ಚಿನ ಸಾಹಿತಿ, ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಹಿಂದೂಸ್ತಾನಿ/ಕರ್ನಾಟಕ ವಾದ್ಯ ಸಂಗೀತ, ನಾಟಕ- 10 ರಿಂದ 18 ತಂಡದ ಸದಸ್ಯರು ಭಾಗವಹಿಸಬಹುದು.
ಸ್ಪರ್ಧಿಗಳು ಸ್ವ ವಿವರದ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿವರವನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಭವನ ದಾವಣಗೆರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-234849ನ್ನು ಸಂಪರ್ಕಿಸಬಹುದು.




