ಬಳ್ಳಾರಿ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಪ್ರದೇಶದ 20 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವತಿಯರಿಗಾಗಿ ಕೃತಕ ಆಭರಣ (ಕಸ್ಟಮ್ ಜುವ್ಯೆಲರಿ) ಉಚಿತ ತರಬೇತಿಯನ್ನು ಈ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ತರಬೇತಿಯ ಅವಧಿ 13 ದಿನಗಳು. ಅ.14 ರಿಂದ ನೀಡಲಾಗುತ್ತದೆ. ಊಟ ವಸತಿಯೊಂದಿಗೆ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಕೌಶಲ್ಯದ ಜೊತೆಗೆ ಉದ್ಯಮಶೀಲತೆ, ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಮಾಹಿತಿ ನೀಡಲಾಗುತ್ತದೆ. ಈ ಕ್ಷೇತ್ರದಲ್ಲಿ ಪ್ರಾಥಮಿಕ ಜ್ಞಾನ ಹೊಂದಿರುವ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಮತ್ತು ಕನ್ನಡ ಭಾಷೆಯನ್ನು ಓದಲು, ಬರೆಯಲು ಬರುವಂತಹ ನಿರುದ್ಯೋಗಿ ಸ್ವ-ಉದ್ಯೋಗ ಆಕಾಂಕ್ಷಿಗಳು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ವಿದ್ಯಾರ್ಹತೆ ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ತರಬೇತಿಯ ಬಗ್ಗೆ ಪ್ರಾಥಮಿಕ ಅನುಭವ ಹೊಂದಿದವರಿಗೆ ಆದ್ಯತೆ ಕೊಡಲಾಗುವುದು.
35 ಜನರಿಗೆ ಮಾತ್ರ ಅವಕಾಶವಿದ್ದು, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಂಸ್ಥೆಯಲ್ಲಿ ಈ ಮೊದಲು ತರಬೇತಿ ಪಡೆದವರು ಪುನಃ ತರಬೇತಿ ಪಡೆಯಲು ಅರ್ಹರಲ್ಲ.
ಆಸಕ್ತ ಅರ್ಹ ಅಭ್ಯರ್ಥಿಗಳು ತ್ವರಿತವಾಗಿ ತಮ್ಮ ಹೆಸರು, ವಿಳಾಸ, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿ, ಸಂಬಂಧಿತ ವಿಷಯದಲ್ಲಿ ಇರುವ ಪ್ರಾಥಮಿಕ ಜ್ಞಾನ, ಅನುಭವ ಹೊಂದಿದವರು ಖುದ್ದಾಗಿ ಅಥವಾ ಕರೆ ಮೂಲಕ ಅಗತ್ಯ ಮಾಹಿತಿ ನೀಡಿ ಅ.10 ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದು.
ತರಬೇತಿಗೆ ಆಯ್ಕೆಯಾದ ಕುರಿತು ನಮೂದಿಸಿದ ಮೊಬೈಲ್ ನಂಬರ್ಗೆ ಕರೆ ಮಾಡಿ ತಿಳಿಸಲಾಗುವುದು. ತರಬೇತಿಯಲ್ಲಿ ಪಾಲ್ಗೊಳ್ಳಲು ತಗುಲುವ ಪ್ರಯಾಣ ಭತ್ಯೆಯನ್ನು ತಾವೇ ಭರಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಅಥವಾ ದೂ.08392-299117, ಮೊ.9449860659, 9008464120 ಗೆ ಸಂಪರ್ಕಿಸಬಹುದು.




