ಶೀಘ್ರ ಪೋಡಿ ಮುಕ್ತ ಗ್ರಾಮ ಅಭಿಯಾನ: ಕೃಷ್ಣ ಬೈರೇಗೌಡ

2 years ago

ಮೈಸೂರು: ರಾಜ್ಯದಲ್ಲಿ ಶೀಘ್ರ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮೈಸೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೋಡಿ ಮುಕ್ತ ಗ್ರಾಮ ಅಭಿಯಾನ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ರಾಜ್ಯದಲ್ಲಿ 22 ಲಕ್ಷ ಖಾಸಗಿ ಆರ್ಟಿಸಿಗಳಿಗೆ ಪೋಡಿ ಆಗಿಲ್ಲ. ಪ್ರತಿಯೊಂದು ಆರ್ಟಿಸಿಯಲ್ಲಿ ಮೂರು ರಿಂದ ನಾಲ್ಕು ಜನ ಆರ್ಟಿಸಿ ಮಾಲೀಕರು ಇರುತ್ತಾರೆ. ಈ ಜಮೀನುಗಳ ಪೋಡಿ ಆಗಿಲ್ಲ ಎಂದರು.

ಇನ್ನೂ ಸರ್ಕಾರಿಂದ ಭೂ ಮಂಜೂರಾದವ ಜಮೀನುಗಳೂ ಪೋಡಿ ಆಗಿಲ್ಲ. ಹೀಗಾಗಿ ಪೋಡಿ ಮುಕ್ತ ಅಭಿಯಾನದ ಅಡಿಯಲ್ಲಿ ಇಂತಹ ಜನರನ್ನು ನಾವೇ ಗುರುತಿಸಿ ಸರ್ಕಾರದಿಂದ ನಾವೇ ಪೋಡಿ ಮಾಡಿಕೊಡಲಿದ್ದೇವೆ. ಕೇಸ್ ಬೈ ಕೇಸ್ ಮಾಡುವುದರಿಂದ ಬಡವರಿಗೆ ಅನುಕೂಲವಾಗಲ್ಲ. ಹೀಗಾಗಿ ಪೋಡಿ ಮುಕ್ತ ಗ್ರಾಮಗಳ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಿದಂತೆ ಪೋಡಿಮುಕ್ತ ಅಭಿಯಾನಕ್ಕೆ ಶೀಘ್ರವೇ ಚಾಲನೇ ನೀಡಲಾಗುವುದು ಎಂದರು.

Leave a Reply